ನವದೆಹಲಿ: ಗುಜರಾತ್ ಗಲಭೆ ಕುರಿತು ಬಿಬಿಸಿ ನಿರ್ಮಿತ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವ ನಿರ್ಧಾರಕ್ಕೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಈ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಂ.ಎಂ.ಸುಂದ್ರೇಶ್ ಅವರಿದ್ದ ನ್ಯಾಯಪೀಠ, ಮೂರು ವಾರಗಳ ಒಳಗಾಗಿ ಈ ವಿಷಯ ಕುರಿತು ಪ್ರಮಾಣಪತ್ರ ಸಲ್ಲಿಸಬೇಕು. ಮುಂದಿನ ವಿಚಾರಣೆ ವೇಳೆ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು ಎಂದು ಸೂಚಿಸಿತು.
ವಿಚಾರಣೆಯನ್ನು ಏಪ್ರಿಲ್‌ಗೆ ಮುಂದೂಡಿ ನ್ಯಾಯಪೀಠ ಆದೇಶಿಸಿತು.
ಸಾಕ್ಷ್ಯಚಿತ್ರ ಪ್ರಸಾರ ನಿಷೇಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಪತ್ರಕರ್ತ ಎನ್.ರಾಮ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ಪ್ರಶಾಂತ್‌ಭೂಷಣ್, ವಕೀಲ ಎಂ.ಎಲ್.ಶರ್ಮಾ ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.