ADVERTISEMENT

ಮನೆ ಬಾಡಿಗೆ ಕೇಳದಂತೆ ಸರ್ಕಾರದ ಆದೇಶ ಜಾರಿಮಾಡಲು ಸಾಧ್ಯವಾಗದು: ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 5 ಮೇ 2020, 12:40 IST
Last Updated 5 ಮೇ 2020, 12:40 IST
   

ನವದೆಹಲಿ: ಲಾಕ್‌ಡೌನ್‌ ವೇಳೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಂದ ಮನೆ ಬಾಡಿಗೆ ಕೇಳದಂತೆ ಗೃಹ ಸಚಿವಾಲಯವು ಹೊರಡಿಸಿರುವ ಆದೇಶ ಅನುಸರಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ವಿಡಿಯೊ ಕಾನ್ಫರೆನ್ಸಿಂಗ್‌‌ ಮೂಲಕಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ಅವರಿದ್ದ ನ್ಯಾಯಪೀಠವು, ‘ಸರ್ಕಾರದ ಆದೇಶಗಳನ್ನು ಸುಪ್ರೀಂ ಕೋರ್ಟ್‌ ಅನುಷ್ಠಾನಗೊಳಿಸಲು ಸಾಧ್ಯವಿಲ್ಲ’ ಎಂದು ತಿಳಿಸಿ, ಅರ್ಜಿ ವಜಾಗೊಳಿಸಿತು.

ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಂದ ಮನೆ ಮಾಲೀಕರು ಬಾಡಿಗೆ ಕೇಳುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಕೀಲರಾದ ಪವನ್‌ ಪ್ರಕಾಶ್‌ ಹಾಗೂ ಎ.ಕೆ.ಪಾಂಡೆ ಅರ್ಜಿ ಸಲ್ಲಿಸಿದ್ದರು. ‘ಮನೆ ಖಾಲಿ ಮಾಡುವಂತೆ ಒತ್ತಾಯಿಸುವ ಮನೆ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು’ ಎಂದುಮಾರ್ಚ್‌ 29ರಂದು ಗೃಹ ಸಚಿವಾಲಯ ಹೊರಡಿಸಿದ ಆದೇಶವನ್ನು ಅಂಗೀಕರಿಸಬೇಕು ಎಂದೂ ಅರ್ಜಿದಾರರು ಕೇಳಿಕೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.