ನವದೆಹಲಿ: ಆರ್ಥಿಕ ದುರ್ಬಲ ವರ್ಗದ (ಇಡಬ್ಲ್ಯುಎಸ್) ವ್ಯಕ್ತಿಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯ ಸಿಂಧುತ್ವವನ್ನು ಎತ್ತಿ ಹಿಡಿದಿರುವ ತನ್ನ ತೀರ್ಪನ್ನು ಪ್ರಶ್ನಿಸಿ, ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಎಸ್. ರವೀಂದ್ರ ಭಟ್, ಬೇಲಾ ಎಂ. ತ್ರಿವೇದಿ ಹಾಗೂ ಜೆ.ಬಿ. ಪಾರ್ದೀವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಮೇ 9ರಂದು ಈ ಆದೇಶವನ್ನು ನೀಡಿದೆ.
ಈ ಕುರಿತ ಆದೇಶವನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ. ‘ಮರುಪರಿಶೀಲನೆಗಾಗಿ ಸಲ್ಲಿಸುವ ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. ಮುಕ್ತ ನ್ಯಾಯಾಲಯದಲ್ಲಿ ಮರುಪರಿಶೀಲನಾ ಅರ್ಜಿಗಳನ್ನು ಪಟ್ಟಿ ಮಾಡಲು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಸುಪ್ರೀಂ ಕೋರ್ಟ್‌ನ 2013ರ ನಿಯಮಗಳ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗೆ ಯಾವುದೇ ಪ್ರಕರಣವಿಲ್ಲ. ಆದ್ದರಿಂದ, ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.
2022ರ ನ. 7ರಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠವು ವಿಭಿನ್ನ ತರ್ಕದೊಂದಿಗೆ ನಾಲ್ಕು ಪ್ರತ್ಯೇಕ ತೀರ್ಪುಗಳನ್ನು ನೀಡಿತ್ತು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಬೇಲಾ ತ್ರಿವೇದಿ ಮತ್ತು ನ್ಯಾಯಮೂರ್ತಿ ಜೆ.ಪಿ. ಪಾರ್ದೀವಾಲಾ ಅವರು ಮೂರು ಪ್ರತ್ಯೇಕ ತೀರ್ಪುಗಳಲ್ಲಿ 103ನೇ ತಿದ್ದುಪಡಿಯನ್ನು ಎತ್ತಿ ಹಿಡಿದಿದ್ದರು. ಆದರೆ, ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಅವರ ನೇತೃತ್ವದ ನ್ಯಾಯಪೀಠವು ಅಲ್ಪಸಂಖ್ಯಾತರ ತೀರ್ಪಿನಲ್ಲಿ ಸಂವಿಧಾನ 103ನೇ ತಿದ್ದುಪಡಿಯನ್ನು ರದ್ದುಗೊಳಿಸಿತ್ತು.
Cut-off box - ಮಂಗಳವಾರ ಬಿಡುಗಡೆ ಮಾಡಿದ ಆದೇಶದಲ್ಲಿ "ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲು ಅನುಮತಿಗಾಗಿ ಅರ್ಜಿಗಳನ್ನು ಅನುಮತಿಸಲಾಗಿದೆ ಮುಕ್ತ ನ್ಯಾಯಾಲಯದಲ್ಲಿ ಮರುಪರಿಶೀಲನಾ ಅರ್ಜಿಗಳನ್ನು ಪಟ್ಟಿ ಮಾಡಲು ಅರ್ಜಿಗಳನ್ನು ತಿರಸ್ಕರಿಸಲಾಗಿದೆ ವಿಳಂಬವನ್ನು ಕ್ಷಮಿಸಲಾಗಿದೆ ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದಾಗ ಮುಖದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ. 2013 ರ ಸರ್ವೋಚ್ಚ ನ್ಯಾಯಾಲಯದ ನಿಯಮಗಳ XLVII ನಿಯಮ 1 ರ ಅಡಿಯಲ್ಲಿ ಪರಿಶೀಲನೆಗೆ ಯಾವುದೇ ಪ್ರಕರಣವಿಲ್ಲ. ಆದ್ದರಿಂದ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.