ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೊರೇನ್‌ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 10 ಮೇ 2024, 12:43 IST
Last Updated 10 ಮೇ 2024, 12:43 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತೀರ್ಪು ನೀಡಲು ಹೈಕೋರ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಇತ್ಯರ್ಥಪಡಿಸಿದೆ.

ಈ ಸಂಬಂಧ ಈಗಾಗಲೇ ಹೈಕೋರ್ಟ್‌ ಮೇ 3ರಂದು ತೀರ್ಪು ನೀಡಿದ್ದು, ಅದನ್ನು ಪ್ರಶ್ನಿಸಿ ಸೊರೇನ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹೀಗಿರುವಾಗ ಈ ಅರ್ಜಿಯು ನಿರುಪಯುಕ್ತವಾಗಿದೆ ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರ ಪೀಠ ತಿಳಿಸಿದೆ.

ಹೈಕೋರ್ಟ್‌ ತೀರ್ಪು ನೀಡುವವರೆಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಮಧ್ಯಂತರ ಜಾಮೀನು ಮಂಜೂರು ಮಾಡುವಂತೆಯೂ ಸೊರೇನ್‌ ಅರ್ಜಿಯಲ್ಲಿ ಕೋರಿದ್ದರು.

ADVERTISEMENT

ಈ ಅರ್ಜಿಯು ನಿರುಪಯುಕ್ತವಾಗಿದೆ ಎಂದು ನ್ಯಾಯಪೀಠವು ಸೊರೇನ್‌ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ಮತ್ತು ಅರುಣಭ್‌ ಚೌಧರಿಗೆ ಅವರಿಗೆ ಹೇಳಿತು.

ಕಳೆದ ವಾರ ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸೊರೇನ್‌ ಅವರು ಸಲ್ಲಿಸಿರುವ ವಿಶೇಷ ರಜೆ ಅರ್ಜಿಯು (ಎಲ್‌ಎಲ್‌ಪಿ) ಇದೇ 13ರಂದು ವಿಚಾರಣೆಗೆ ಬರಲಿದೆ ಎಂದು ಸಿಬಲ್‌ ಪೀಠದ ಗಮನಕ್ಕೆ ತಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.