ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ– ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಇದೇ ಫೆಬ್ರುವರಿ 26ರಂದು ನಡೆಸಲು ಸುಪ್ರೀಂಕೋರ್ಟ್ ಬುಧವಾರ ತೀರ್ಮಾನಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು ಇದರ ವಿಚಾರಣೆ ನಡೆಸಲಿದೆ.
ಕಳೆದ ಜನವರಿ 29ರಂದು ಆರಂಭವಾಗಬೇಕಿದ್ದ ವಿಚಾರಣೆಯನ್ನು ಪೀಠದಲ್ಲಿದ್ದ ಐವರು ನ್ಯಾಯಮೂರ್ತಿಗಳ ಪೈಕಿ ಒಬ್ಬರಾದ ಎಸ್.ಎ.ಬೋಬ್ಡೆ ಅವರ ಅಲಭ್ಯತೆಯಿಂದಾಗಿ ಜ.27ರಂದು ರದ್ದುಪಡಿಸಲಾಗಿತ್ತು.
ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಎ.ನಜೀರ್ ಅವರು ಪೀಠದ ಉಳಿದ ಸದಸ್ಯರಾಗಿದ್ದಾರೆ.
ಕಕ್ಷಿದಾರರಾದ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್ ಲಲ್ಲಾಗೆ 2.77 ಎಕರೆ ಭೂಮಿಯನ್ನು ಸಮಾನವಾಗಿ ಹಂಚಿಕೆ ಮಾಡುವಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿ ಮತ್ತು ನಾಲ್ಕು ಸಿವಿಲ್ ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.