ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ– ಬಾಬರಿ ಮಸೀದಿ ವಿವಾದಿತ ಜಾಗ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 4 ರಂದು ಕೈಗೆತ್ತಿಕೊಳ್ಳಲಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿಸಂಜಯ್ ಕಿಶನ್ ಕೌಲ್ ಅವರ ಪೀಠದ ಎದುರು ಅರ್ಜಿ ವಿಚಾರಣೆಗೆ ಬರಲಿದೆ.
ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಿರುವ 14 ಅರ್ಜಿಗಳ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚಿಸುವ ಸಾಧ್ಯತೆ ಇದೆ.
ಜನವರಿ ಮೊದಲನೇ ವಾರದಲ್ಲಿ ಸೂಕ್ತ ಪೀಠದ ಎದುರು ಅರ್ಜಿ ವಿಚಾರಣೆಗೆ ಬರಲಿದೆ ಎಂದು ಸುಪ್ರೀಂ ಕೋರ್ಟ್ ಅಕ್ಟೋಬರ್ 29 ರಂದು ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.