ADVERTISEMENT

ತೃತೀಯಲಿಂಗಿಗಳಿಂದ ರಕ್ತದಾನ ನಿರಾಕರಣೆ: ಕೇಂದ್ರಕ್ಕೆ ನೋಟಿಸ್

ಪಿಟಿಐ
Published 2 ಆಗಸ್ಟ್ 2024, 14:22 IST
Last Updated 2 ಆಗಸ್ಟ್ 2024, 14:22 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ತೃತೀಯಲಿಂಗಿಗಳು, ಸಲಿಂಗಕಾಮಿಗಳು ಮತ್ತು ಲೈಂಗಿಕ ಕಾರ್ಯಕರ್ತೆಯರನ್ನು ರಕ್ತದಾನದಿಂದ ದೂರವಿಟ್ಟ ಮಾರ್ಗಸೂಚಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಕೇಂದ್ರ ಸರ್ಕಾರ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಮತ್ತು ರಾಷ್ಟ್ರೀಯ ರಕ್ತ ವರ್ಗಾವಣೆ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.

ADVERTISEMENT

2017ರ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಕಾರ್ಯಕರ್ತ ಷರೀಫ್ ಡಿ. ರಂಗ್ನೇಕರ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

2017ರ ಮಾರ್ಗಸೂಚಿಯು ತೃತೀಯಲಿಂಗಿಗಳು, ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರು (ಎಂಎಸ್‌ಎಂ) ಮತ್ತು ಮಹಿಳಾ ಲೈಂಗಿಕ ಕಾರ್ಯಕರ್ತೆಯರನ್ನು ರಕ್ತದಾನದಿಂದ ಹೊರಗಿಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.