ADVERTISEMENT

ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ಗೆ ಬಂಧನದಿಂದ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 9:24 IST
Last Updated 22 ನವೆಂಬರ್ 2021, 9:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮಹಾರಾಷ್ಟ್ರದಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಅವರಿಗೆ ಸುಪ್ರೀಂ ಕೋರ್ಟ್‌ ಸೋಮವಾರ ಬಂಧನದಿಂದ ರಕ್ಷಣೆ ನೀಡಿದೆ.

ಸಿಂಗ್‌ ಅವರ ಅರ್ಜಿ ಕುರಿತು ಸರ್ಕಾರ, ಡಿಜಿಪಿ ಮತ್ತು ಸಿಬಿಐನಿಂದ ಪ್ರತಿಕ್ರಿಯೆಯನ್ನೂ ಕೇಳಿದೆ.

ಮಹಾರಾಷ್ಟ್ರದ ಆಗಿನ ಗೃಹಸಚಿವ ಅನಿಲ್‌ ದೇಶ್‌ಮುಖ್‌ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಿಂಗ್‌ ಅವರು ಕ್ರಿಮಿನಲ್‌ ಪ್ರಕರಣಗಳಲ್ಲಿ ತಮ್ಮನ್ನು ಸಿಲುಕಿಸಲಾಗಿದೆ ಎಂದು ದೂರಿದ್ದರು.

ADVERTISEMENT

ಬಂಧನದಿಂದ ರಕ್ಷಣೆ ನೀಡುವಂತೆ ಕೋರ್ಟ್‌ ಮೊರೆ ಹೋಗಿದ್ದಲ್ಲದೆ, ಇಡೀ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

ನ್ಯಾಯಮೂರ್ತಿ ಎಸ್‌.ಕೆ. ಕೌಲ್‌ ಮತ್ತು ಎಂ.ಎಂ. ಸುಂದ್ರೇಶ್‌ ಅವರನ್ನು ಒಳಗೊಂಡ ಪೀಠವು ಸಿಂಗ್‌ ಅವರ ಮನವಿ ಬಗ್ಗೆ ಮಹಾರಾಷ್ಟ್ರ ಸರ್ಕಾರ, ಡಿಜಿಪಿ ಸಂಜಯ್‌ ಪಾಂಡೆ ಮತ್ತು ಸಿಬಿಐಗೆ ನೋಟಿಸ್‌ ನೀಡಿದೆ.

’ ನೋಟಿಸ್‌ ಜಾರಿ ಮಾಡಲಾಗಿದ್ದು, ಡಿ. 6ರ ವೇಳೆಗೆ ಉತ್ತರಿಸಬೇಕು. ಈ ಮಧ್ಯೆ ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಮತ್ತು ಅವರನ್ನು ಬಂಧಿಸಬಾರದು‘ ಎಂದು ಪೀಠ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.