ನವದೆಹಲಿ: ಕೋವಿಡ್–19 ಪಿಡುಗಿನ ಸಂದರ್ಭದಲ್ಲಿ ಅಲೋಪಥಿ ಚಿಕಿತ್ಸಾಪದ್ಧತಿ ಹಾಗೂ ಈ ಪದ್ಧತಿಯ ವೈದ್ಯರಿಗೆ ಅವಮಾನಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಅವರನ್ನು ಸುಪ್ರೀಂಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತು.
‘ಅಲೋಪಥಿಯಂತಹ ಆಧುನಿಕ ಚಿಕಿತ್ಸಾಪದ್ಧತಿಯನ್ನು ಟೀಕಿಸುವ ವೇಳೆ ಸಂಯಮ ಇರಲಿ’ ಎಂದು ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, ರಾಮದೇವ್ ಅವರಿಗೆ ಸೂಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.