ADVERTISEMENT

ನಿವೃತ್ತ ನ್ಯಾಯಮೂರ್ತಿ ರಂಜನ್‌ ಗೊಗೊಯಿ ವಿರುದ್ಧದ ಅರ್ಜಿ ತಿರಸ್ಕೃತ

ಪಿಟಿಐ
Published 21 ಆಗಸ್ಟ್ 2020, 8:32 IST
Last Updated 21 ಆಗಸ್ಟ್ 2020, 8:32 IST
ರಂಜನ್‌ ಗೊಗೊಯಿ
ರಂಜನ್‌ ಗೊಗೊಯಿ   

ನವದೆಹಲಿ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾಗ ರಂಜನ್‌ ಗೊಗೊಯಿ ಅವರು ನಡೆದುಕೊಂಡ ರೀತಿ ಬಗ್ಗೆ ತನಿಖೆ ನಡೆಸಲು ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

‘ಎರಡು ವರ್ಷಗಳಿಂದ ಯಾಕೆ ಈ ಸಂಬಂಧ ಅರ್ಜಿ ಸಲ್ಲಿಸಲಿಲ್ಲ. ಗೊಗೊಯಿ ಅವರು ಈಗಾಗಲೇ ನಿವೃತ್ತಿಯಾಗಿದ್ದಾರೆ. ಹಾಗಾಗಿ ಈಗ ಅರ್ಜಿ ಸಲ್ಲಿಸಿರುವುದು ಅಪ್ರಸ್ತುತವಾಗಿದೆ ಎಂದು ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ಪೀಠವು ಹೇಳಿದೆ.

ಅರುಣ್‌ ರಾಮಚಂದ್ರ ಹುಬ್ಲಿಕರ್‌ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ಪೀಠವುಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ನಿರಾಕರಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.