ನವದೆಹಲಿ: ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ ರಾಜ್ಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಪಶ್ಚಿಮ ಬಂಗಾಳ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
‘ಇದೊಂದು ರಾಜ್ಯ ಪ್ರಾಯೋಜಿತ ಹಿಂಸಾಚಾರವಾಗಿದ್ದು, ಎಸ್‌ಐಟಿಯಿಂದ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಸರನ್ ಮತ್ತು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನೊಳಗೊಂಡರಜಾಕಾಲದ ಪೀಠ, ಅರ್ಜಿದಾರರ ಪರ ವಕೀಲರಮನವಿಯ ಮೇರೆಗೆರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್‌ಸಿ) ಮತ್ತು ರಾಷ್ಟ್ರೀಯ ಮಹಿಳಾ ಆಯೋಗವನ್ನು ಪ್ರತಿವಾದಿಯನ್ನಾಗಿ ಮಾಡುವಂತೆಸೂಚಿಸಿದೆ.
’ಮುಂದಿನ ವಿಚಾರಣೆ ಜೂನ್ 7ರಂದು ಶುರುವಾಗಲಿದ್ದು ಅಷ್ಟರ ಒಳಗೆ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ತಮ್ಮ ಪ್ರತಿಕ್ರಿಯೆ ನೀಡಬೇಕು‘ ಎಂದು ಪೀಠ ಸೂಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.