ADVERTISEMENT

ವಿದ್ಯಾರ್ಥಿನಿಯರಿಗೆ ಉಚಿತ ನ್ಯಾಪ್‌ಕಿನ್‌: ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ಪಿಟಿಐ
Published 28 ನವೆಂಬರ್ 2022, 11:06 IST
Last Updated 28 ನವೆಂಬರ್ 2022, 11:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ (ಪಿಟಿಐ): ಸರ್ಕಾರಿ ಶಾಲೆಗಳ 6ರಿಂದ 12ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡುವಂತೆ ನಿರ್ದೇಶನ ನೀಡಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಬಗ್ಗೆ ಸುಪ್ರೀಂಕೋರ್ಟ್‌, ಸೋಮವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ. ಪಿ.ಎಸ್‌. ನರಸಿಂಹ ಅವರನ್ನು ಒಳಗೊಂಡ ನ್ಯಾಯಪೀಠ, ಈ ಸಂಬಂಧ ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್‌ ರವಾನಿಸಿದೆ.

ಮಧ್ಯಪ್ರದೇಶ ಮೂಲದ ವೈದ್ಯ, ಸಾಮಾಜಿಕ ಕಾರ್ಯಕರ್ತ ಜಯ ಠಾಕೂರ್‌ ಅವರು ಈ ಪಿಐಎಲ್ ಸಲ್ಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.