ನವದೆಹಲಿ: ಜಾರಿ ನಿರ್ದೇಶನಾಲಯದ ಮುಖ್ಯಸ್ಥರ ಅಧಿಕಾರವಧಿ ವಿಸ್ತರಣೆಯನ್ನು ಪ್ರಶ್ನಿಸಿದ್ದ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರ ಮತ್ತು ಕೇಂದ್ರ ಜಾಗೃತ ಆಯೋಗಕ್ಕೆ (ಸಿವಿಸಿ) ಸೂಚಿಸಿದೆ.
ಅಧಿಕಾರವಧಿಯ ವಿಸ್ತರಣೆ ಮತ್ತು ಐದು ವರ್ಷದವರೆಗೂ ಅವಧಿ ವಿಸ್ತರಿಸುವುದಕ್ಕೆ ಪೂರಕವಾಗಿ ಕಾಯ್ದೆಗೆ ತಿದ್ದುಪಡಿ ತಂದಿದ್ದನ್ನು ಪ್ರಶ್ನಿಸಿ ಎಂಟು ವಿವಿಧ ಅರ್ಜಿಗಳು ಸಲ್ಲಿಕೆಯಾಗಿದ್ದವು.ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠವು ಈ ಕುರಿತು ನೋಟಿಸ್ ನೀಡಲು ಆದೇಶಿಸಿತು.
ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಜಯಾ ಠಾಕೂರ್, ಟಿಎಂಸಿ ನಾಯಕ ಸಾಕೇತ್ ಗೋಖಲೆ ಮತ್ತು ವಕೀಲ ಎಂ.ಎಲ್. ಶರ್ಮಾ ಅವರು ಈ ಕುರಿತು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.