ADVERTISEMENT

ಸಂಭಲ್ ಹಿಂಸಾಚಾರ| ಗಮನಹರಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿದ ಪ್ರಿಯಾಂಕಾ ಗಾಂಧಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2024, 7:44 IST
Last Updated 25 ನವೆಂಬರ್ 2024, 7:44 IST
<div class="paragraphs"><p>ಪ್ರಿಯಾಂಕಾ ಗಾಂಧಿ ವಾದ್ರಾ</p></div>

ಪ್ರಿಯಾಂಕಾ ಗಾಂಧಿ ವಾದ್ರಾ

   

ಪಿಟಿಐ (ಸಂಗ್ರಹ ಚಿತ್ರ) 

ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್‌ ಸರ್ಕಾರವು ಸಮಾಜದಲ್ಲಿ ಒಡಕುಗಳನ್ನು ಸೃಷ್ಟಿಸುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಗಮನಹರಿಸಬೇಕೆಂದು ವಯನಾಡ್‌ ಸಂಸದೆ ಹಾಗೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.

ADVERTISEMENT

ಸಂಭಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿ ಸೇರಿ ಹಲವು ಗಾಯಗೊಂಡಿದ್ದಾರೆ.

‘ಅಲ್ಲಿನ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಅಧಿಕಾರದಲ್ಲಿರುವವರೇ ತಾರತಮ್ಯ, ದಬ್ಬಾಳಿಕೆ ಹಾಗೂ ಸಮಾಜ ವಿಭಜನೆಗೆ ಯತ್ನಿಸುತ್ತಿದ್ದಾರೆ. ಇಂತಹ ನಡುವಳಿಕೆ ಜನರ ಅಥವಾ ದೇಶದ ಹಿತಾಸಕ್ತಿಗೆ ಮಾರಕವಾಗುತ್ತದೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಅರಿತು ನ್ಯಾಯವನ್ನು ನೀಡಬೇಕು‘ ಎಂದು ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.

‘ಎಲ್ಲ ಸಂದರ್ಭಗಳಲ್ಲೂ ಶಾಂತಿ ಕಾಪಾಡಬೇಕು ಎಂದು ರಾಜ್ಯದ ಜನತೆಗೆ ಪ್ರಿಯಾಂಕಾ ಮನವಿ‘ ಮಾಡಿದ್ದಾರೆ.

‘ಅಮಾಯಕರ ಹತ್ಯೆಗೆ ಸಿಎಂ ಆದಿತ್ಯನಾಥ್ ಆಡಳಿತವೇ ಸಂಪೂರ್ಣ ಹೊಣೆಯಾಗಿದೆ. ಸಂಭಾಲ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಬಿಜೆಪಿ-ಆರ್‌ಎಸ್‌ಎಸ್ ಕಾರಣ ಎಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ.

ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದ್ದು, ನ.30ರವರೆಗೆ ಹೊರಗಿನ ಜನರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.