ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರನ್ನು ದೋಷಿ ಎಂದು ಪರಿಗಣಿಸಿ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ.
ಇದೇ ವೇಳೆ, ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನು ಒಳಗೊಂಡ ನ್ಯಾಯಪೀಠವು ಪೊನ್ಮುಡಿ ಅವರ ಪತ್ನಿ ಪಿ.ವಿಶಾಲಾಕ್ಷಿ ಅವರಿಗೆ ವಿಧಿಸಿದ್ದ ಶಿಕ್ಷೆಯನ್ನೂ ಅಮಾನತು ಮಾಡಿದೆ.
ಪೊನ್ಮುಡಿ ಮತ್ತು ಅವರ ಪತ್ನಿ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಿದರು.
ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗತಿಯಾಗುವುದರಿಂದ ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ವಿನಾಯಿತಿ ನೀಡಿತ್ತು. ಹೀಗಾಗಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಇದುವರೆಗೆ ಬಂಧಿಸಿರಲಿಲ್ಲ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಮದ್ರಾಸ್ ಹೈಕೋರ್ಟ್ ತೀರ್ಪು ಪ್ರಕಟಿಸಿದ ನಂತರ ಪೊನ್ಮುಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.