ನವದೆಹಲಿ: ಅತ್ಯಾಚಾರ ಪ್ರಕರಣದ ಅಪರಾಧಿ, ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿಗೆ ಗುಜರಾತ್ ಹೈಕೋರ್ಟ್ ಮಂಜೂರು ಮಾಡಿದ್ದ ಎರಡು ವಾರಗಳ ಗೈರು ಹಾಜರಿ ರಜೆಯನ್ನು (ಫರ್ಲೊ) ಸುಪ್ರೀಂಕೋರ್ಟ್ ಮಂಗಳವಾರ ತಡೆಹಿಡಿದಿದೆ.
ಜೂನ್ 24ರಂದು ಗುಜರಾತ್ ಹೈಕೋರ್ಟ್‌ನ ಏಕಸದಸ್ಯ ಪೀಠವು ನಾರಾಯಣ ಸಾಯಿಗೆ ಎರಡು ವಾರಗಳ ಫರ್ಲೊ ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಎಂ.ಆರ್ ಶಾ ಅವರ ಪೀಠವು, ಗುಜರಾತ್ ಹೈಕೋರ್ಟ್ ಆದೇಶವನ್ನು ತಡೆಹಿಡಿದಿದೆ ಮತ್ತು ನಾರಾಯಣ ಸಾಯಿಗೆ ನೋಟಿಸ್ ಜಾರಿ ಮಾಡಿದೆ. ಜತೆಗೆ, ಈ ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಬಳಿಕ ನಿಗದಿ ಮಾಡಿದೆ.
ನಾರಾಯಣ ಸಾಯಿ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು ಎಂಬ ಕಾರಣಕ್ಕೆ ಈ ಹಿಂದೆಯೂ ಗುಜರಾತ್ ಹೈಕೋರ್ಟ್ ಅವರಿಗೆ ಫರ್ಲೊ ಮಂಜೂರು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.