ADVERTISEMENT

ಚುನಾವಣಾ ಬಾಂಡ್: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪಿಟಿಐ
Published 2 ನವೆಂಬರ್ 2023, 16:30 IST
Last Updated 2 ನವೆಂಬರ್ 2023, 16:30 IST
ಕಾವೇರಿ: ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’
ಕಾವೇರಿ: ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’   

ನವದೆಹಲಿ: ರಾಜಕೀಯ ಪಕ್ಷಗಳಿಗೆ ಈ ವರ್ಷದ ಸೆಪ್ಟೆಂಬರ್‌ 30ರವರೆಗೆ ಬಂದಿರುವ ದೇಣಿಗೆಯ ಕುರಿತ ವಿವರ ನೀಡುವಂತೆ ಸುಪ್ರೀಂ ಕೋರ್ಟ್‌, ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಚುನಾವಣಾ ಬಾಂಡ್‌ಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತ ತೀರ್ಪನ್ನು ಕೋರ್ಟ್‌ ಕಾಯ್ದಿರಿಸಿದೆ.

ಈಗಿನ ವ್ಯವಸ್ಥೆಯಲ್ಲಿ ಇರುವಂತಹ ಲೋಪಗಳಿಂದ ಅತೀತವಾದ ಬೇರೊಂದು ವ್ಯವಸ್ಥೆಯನ್ನು ಕೇಂದ್ರವು ರೂಪಿಸಬಹುದು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಹೇಳಿದೆ.

ಚುನಾವಣಾ ಬಾಂಡ್ ಯೋಜನೆಯು ಚುನಾವಣಾ ಪ್ರಕ್ರಿಯೆಯಲ್ಲಿ ನಗದು ಹಣದ ಪ್ರಮಾಣವನ್ನು ತಗ್ಗಿಸಿದೆ, ಬ್ಯಾಂಕಿಂಗ್ ವ್ಯವಸ್ಥೆಯ ಬಳಕೆಯನ್ನು ಉತ್ತೇಜಿಸಿದೆ, ಆದರೆ ಈ ಯೋಜನೆಯಲ್ಲಿ ಪಾರದರ್ಶಕತೆಯ ಅಗತ್ಯ ಇದೆ ಎಂದು ಹೇಳಿದೆ. ಲಂಚವನ್ನು ಕಾನೂನುಬದ್ಧಗೊಳಿಸುವಂತೆ ಇರಬಾರದು ಎಂದು ಕೂಡ ಹೇಳಿದೆ.

ADVERTISEMENT

ರಾಜಕೀಯ ಪಕ್ಷಗಳು ಪಡೆದಿರುವ ದೇಣಿಗೆ ಕುರಿತ ವಿವರವನ್ನು ಚುನಾವಣಾ ಆಯೋಗವು ಎರಡು ವಾರಗಳಲ್ಲಿ ತನಗೆ ನೀಡಬೇಕು ಎಂದು ಕೂಡ ಕೋರ್ಟ್‌ ಹೇಳಿದೆ. ದೇಣಿಗೆಯ ವಿಚಾರದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವ ಹೊಣೆಯು ಶಾಸಕಾಂಗ ಹಾಗೂ ಕಾರ್ಯಾಂಗದ ಮೇಲೆ ಇದೆ ಎಂದು ಪೀಠ ಹೇಳಿತು. ‘ಅದನ್ನು ಹೇಗೆ ಮಾಡಬೇಕು ಎಂಬ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ’ ಎಂದು ತಿಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.