ನವದೆಹಲಿ (ಪಿಟಿಐ): ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿವಕೀಲರಾದ ಕಪಿಲ್ ಸಿಬಲ್ ಮತ್ತು ಅಪರ್ಣಾ ಭಟ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದರು.
‘ನಾವು ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸುತ್ತಿದ್ದೇವೆ ಹೊರತು ಸುಪ್ರೀಂ ಕೋರ್ಟ್ ಆದೇಶವನ್ನಲ್ಲ. ನ್ಯಾಯಾಲಯವು ಸರಿಯಾಗಿಯೇ ಮಾಡಿದೆ. ಆದರೆ,ಗುಜರಾತ್ ಸರ್ಕಾರವು ಯಾವ ಆಧಾರದಲ್ಲಿ ಅತ್ಯಾಚಾರ ಅಪರಾಧಿಗಳನ್ನು ಬಿಡುಗಡೆ ಮಾಡಿತು ಎನ್ನುವುದಷ್ಟೇ ನಮ್ಮ ಪ್ರಶ್ನೆ’ ಎಂದು ನ್ಯಾಯಾಲಯಕ್ಕೆ ವಕೀಲ ಕಪಿಲ್ ಸಿಬಿಲ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.