ADVERTISEMENT

ವೈವಾಹಿಕ ಅತ್ಯಾಚಾರ: ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ಪಿಟಿಐ
Published 18 ಸೆಪ್ಟೆಂಬರ್ 2024, 15:34 IST
Last Updated 18 ಸೆಪ್ಟೆಂಬರ್ 2024, 15:34 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ವಿವಾಹ ಸಂಬಂಧದ ಒಳಗೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ಕಾನೂನಿನ ಕ್ರಮದಿಂದ ನೀಡಿರುವ ರಕ್ಷಣೆಯು ಎಷ್ಟರಮಟ್ಟಿಗೆ ಕಾನೂನುಬದ್ಧ ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

ಈ ವಿಚಾರವಾಗಿ ಪ್ರಮಾಣಪತ್ರ ಸಲ್ಲಿಸದೆ ಇರಲು ಕೇಂದ್ರ ಸರ್ಕಾರ ತೀರ್ಮಾನಿಸಿದರೂ, ಕಾನೂನಿನ ತತ್ವಗಳನ್ನು ಮಾತ್ರ ಆಧರಿಸಿ ಈ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಈ ವಿಚಾರದ ಬಗ್ಗೆ ಆದಷ್ಟು ಬೇಗ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದರು. 

ADVERTISEMENT

ವೈವಾಹಿಕ ಸಂಬಂಧದಲ್ಲಿ ನಡೆಯುವ ಅತ್ಯಾಚಾರವನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವುದಕ್ಕೆ ಸಂಬಂಧಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೋರ್ಟ್‌ 2023ರ ಜನವರಿಯಲ್ಲಿ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.