ADVERTISEMENT

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ: ಸುಪ್ರೀಂ ತೀರ್ಪು ನಾಳೆ

ಪಿಟಿಐ
Published 22 ಸೆಪ್ಟೆಂಬರ್ 2024, 16:31 IST
Last Updated 22 ಸೆಪ್ಟೆಂಬರ್ 2024, 16:31 IST
   

ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರವನ್ನು ಡೌನ್‌ಲೋಡ್‌ ಮಾಡಿ, ಅದನ್ನು ವೀಕ್ಷಿಸುವುದು ಪೋಕ್ಸೊ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಅಪರಾಧ ಆಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶದ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ತನ್ನ ತೀರ್ಪು ಪ್ರಕಟಿಸಲಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇರುವ ತ್ರಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸುವ ನಿರೀಕ್ಷೆ ಇದೆ. ಮದ್ರಾಸ್ ಹೈಕೋರ್ಟ್‌ನ ಆದೇಶವು ಆಘಾತಕಾರಿ ಎಂದು ಹೇಳಿದ್ದ ತ್ರಿಸದಸ್ಯ ಪೀಠವು, ಆ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಈ ಹಿಂದೆ ಒಪ್ಪಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT