ADVERTISEMENT

ಶಂಭು ಗಡಿಯಲ್ಲಿ ಬ್ಯಾರಿಕೇಡ್‌ ತೆರವು ಅರ್ಜಿ: 22 ರಂದು ಸುಪ್ರೀಂ ಕೋರ್ಟ್‌ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 16:03 IST
Last Updated 16 ಜುಲೈ 2024, 16:03 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಅಂಬಾಲ ಬಳಿಯ ಶಂಭು ಗಡಿಯಲ್ಲಿ ಹಾಕಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಹರಿಯಾಣ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜುಲೈ 22 ರಂದು ನಡೆಸಲಿದೆ.

ಹರಿಯಾಣ ಸರ್ಕಾರ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್‌ ಲೋಕೇಶ್‌ ಸಿನ್ಹಲ್ ಅವರು ಈ ಪ್ರಕರಣದ ತುರ್ತು ಪರಿಗಣನೆಯ ಅಗತ್ಯವಿದೆ ಎಂದರು. ಅವರ ವಾದವನ್ನು ಒಪ್ಪಿಕೊಂಡ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಉಜ್ವಲ್‌ ಭುಯಿಯಾಂ ಅವರಿದ್ದ ಪೀಠ, ಮುಂದಿನ ಸೋಮವಾರ (ಜುಲೈ 22) ವಿಚಾರಣೆ ನಡೆಸುವುದಾಗಿ ತಿಳಿಸಿತು.

ಶಂಭು ಗಡಿಯಲ್ಲಿ ಹಾಕಿರುವ ಬ್ಯಾರಿಕೇಡ್‌ಗಳನ್ನು ಒಂದು ವಾರದೊಳಗೆ ತೆರವುಗೊಳಿಸುವಂತೆ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ಜುಲೈ 10ರಂದು ಹರಿಯಾಣ ಸರ್ಕಾರಕ್ಕೆ ಆದೇಶಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.