ನವದೆಹಲಿ: ನೀಟ್–ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ವಿರುದ್ಧ ಸಲ್ಲಿಕೆಯಾಗಿರುವ 40ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ (ಜುಲೈ 18) ನಡೆಸಲಿದೆ.
ವಿಚಾರಣೆಯು ಗುರುವಾರಕ್ಕೆ ನಿಗದಿಯಾಗಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಮಾಹಿತಿ ಅಪ್‌ಲೋಡ್ ಆಗಿದೆ. ಈ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ವಿ. ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರು ನಡೆಸಲಿದ್ದಾರೆ.
ನೀಟ್–ಯುಜಿ ಪರೀಕ್ಷೆಗೆ ಸಂಬಂಧಿಸಿ ವಿವಿಧ ಹೈಕೋರ್ಟ್‌ಗಳಲ್ಲಿ ದಾಖಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೋರಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಗುರುವಾರ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.