ADVERTISEMENT

ಸ್ಪೀಕರ್‌ ಆದೇಶ ಪ್ರಶ್ನಿಸಿದ ಠಾಕ್ರೆ ಬಣದ ಅರ್ಜಿ ಜ.22ಕ್ಕೆ ಮುಂದೂಡಿಕೆ

ಪಿಟಿಐ
Published 17 ಜನವರಿ 2024, 15:30 IST
Last Updated 17 ಜನವರಿ 2024, 15:30 IST
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ   

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ನೇತೃತ್ವದ ಬಣವೇ ‘ನಿಜವಾದ ಶಿವಸೇನಾ’ ಎಂದು  ವಿಧಾನಸಭೆ ಸ್ಪೀಕರ್ ರಾಹುಲ್‌ ನಾರ್ವೇಕರ್‌ ನೀಡಿರುವ ಆದೇಶ ಪ್ರಶ್ನಿಸಿರುವ ಶಿವಸೇನಾದ ಉದ್ಧವ್ ಠಾಕ್ರೆ ಬಣದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಇದೇ ತಿಂಗಳ 22ಕ್ಕೆ ಮುಂದೂಡಿದೆ.

ಠಾಕ್ರೆ ಬಣ ಸೋಮವಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯು ಜ.19ಕ್ಕೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವಿಚಾರಣೆಗೆ ನಿಗದಿಪಡಿಸಿತ್ತು.

ಠಾಕ್ರೆ ಬಣದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಈ ಅರ್ಜಿಯನ್ನು ಶುಕ್ರವಾರದ ಬದಲಿಗೆ ಬರುವ ಸೋಮವಾರ (ಜ.22) ವಿಚಾರಣೆ ನಡೆಸುವಂತೆ ಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪೀಠವು ಸಮ್ಮತಿಸಿದೆ.

ADVERTISEMENT

ಶಿಂದೆ ಮತ್ತು ಅವರ ಬೆಂಬಲಿಗ 16 ಶಾಸಕರ ಅನರ್ಹತೆ ಕೋರಿ ಠಾಕ್ರೆ ಬಣ ಸಲ್ಲಿಸಿದ್ದ ಮನವಿಯನ್ನು ಸ್ಪೀಕರ್ ರಾಹುಲ್ ನಾರ್ವೇಕರ್ ತಿರಸ್ಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.