ನವದೆಹಲಿ: ಜಮ್ಮುವಿನಲ್ಲಿ ಅಕ್ರಮವಾಗಿ ಬಂಧಿಸಿಟ್ಟಿರುವ ಸುಮಾರು 150 ರಿಂದ 170 ಮಂದಿ ರೋಹಿಂಗ್ಯಾ ಸಮುದಾಯವರ ಬಿಡುಗಡೆ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಮಾ.25ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ.
ರೋಹಿಂಗ್ಯಾ ಸಮುದಾಯದವರಿಗೆ ಆಶ್ರಯ ನೀಡಿದ್ದ ಮೊಹಮ್ಮದ್ ಸಲೀಮುಲ್ಲಾ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದಾರೆ. ರಾಯಭಾರ ಕಚೇರಿಯ ಪರಿಶೀಲನೆಯ ನಂತರ ಇವರು ಮ್ಯಾನ್ಮಾರ್‌ಗೆ ಗಡೀಪಾರು ಆಗುವ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
‘ರೋಹಿಂಗ್ಯಾ ಸಮುದಾಯದವರ ಬಂಧನ ಕಾನೂನುಬಾಹಿರ ಎಂದು ಸಮರ್ಥಿಸಿದ ಪ್ರಶಾಂತ್ ಭೂಷಣ್, ಇವರನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡಿದರೆ, ಜನಾಂಗೀಯಹತ್ಯೆಗೆ ಒಳಗಾಗುವ ಸಾಧ್ಯತೆಯಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.