ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿನ ಎಎಪಿ–ಕಾಂಗ್ರೆಸ್ ಮೈತ್ರಿಯಿಂದ ಭಯಗೊಂಡಿರುವ ಬಿಜೆಪಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಯತ್ನಿಸುತ್ತಿದೆ ಎಂದು ಸಚಿವ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಎಎಪಿ ನಡುವೆ ಸೀಟು ಹಂಚಿಕೆ ಮಾತುಕತೆಗಳು ಅಂತಿಮಗೊಳ್ಳುತ್ತಿರುವ ವರದಿಗಳು ಬರುತ್ತಿದ್ದಂತೆ ಇ.ಡಿ ಅಧಿಕಾರಿಗಳು 7ನೇ ಸಲ ಸಮನ್ಸ್ ಕಳುಹಿಸಿದ್ದಾರೆ.
ಕೇಜ್ರಿವಾಲ್ ಅವರನ್ನು ಬಂಧಿಸಲು ಸಿಬಿಐ ಕೂಡ ಯೋಜಿಸುತ್ತಿದ್ದು ಇಂದು ಸಂಜೆಯೊಳಗೆ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ನಮಗೆ ವಿಶ್ವಾಸಾರ್ಹ ಮೂಲಗಳಿಂದ ಲಭ್ಯವಾಗಿದೆ ಎಂದರು.
ಮುಂದಿನ ಎರಡು ಮೂರು ದಿನಗಳಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎಂದು ಅವರು ಹೇಳಿದ್ದಾರೆ. ಈ ಆರೋಪಕ್ಕೆ ಸಿಬಿಐ ಅಥವಾ ಬಿಜೆಪಿ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ.
ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಜನರು ಬೀದಿಗಿಳಿಯುತ್ತಾರೆ, ರಾಜಕೀಯ ಸುನಾಮಿ ಬರಲಿದೆ, ನಿಮ್ಮ ರಾಜಕೀಯ ಲೆಕ್ಕಾಚಾರಗಳು ತಪ್ಪಾಗುತ್ತವೆ ಎಂದು ರಾಜ್ಯಸಭೆ ಸಂಸದ ಸಂದೀಪ್ ಪಾಠಕ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.