ಕೊಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಬಂಧಿಸಿರುವ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಹಾಗೂ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮಾಡಿದ ಮನವಿಗೆ ಸಂಬಂಧಿಸಿದ ಆದೇಶವನ್ನು ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.
ಪಾರ್ಥ ಚಟರ್ಜಿ ಅವರನ್ನು 14 ದಿನ ಹಾಗೂ ಅರ್ಪಿತಾ ಮುಖರ್ಜಿಯನ್ನು 13 ದಿನ ವಶಕ್ಕೆ ನೀಡುವಂತೆ ತನಿಖಾ ಸಂಸ್ಥೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಜಿಬೋನ್ ಕುಮಾರ್ ಸಾಧು ಅವರು ಆದೇಶ ಕಾಯ್ದಿರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.