ADVERTISEMENT

ಶುಲ್ಕ ಪಾವತಿಗೆ ಕಾಲಾವಕಾಶ ನೀಡಿಕೆ ಪರಿಶೀಲಿಸಿ: ಸುಪ್ರೀಂ ಕೋರ್ಟ್‌

ಶಾಲಾ ಆಡಳಿತ ಮಂಡಳಿಗಳಿಂದ ಬಾಕಿ ವಸೂಲಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 19:31 IST
Last Updated 12 ಅಕ್ಟೋಬರ್ 2021, 19:31 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ‘ವಿದ್ಯಾರ್ಥಿಗಳ ಶುಲ್ಕ ಪಾವತಿ ಮಾಡಲು ಪೋಷಕರು ಕಾಲಾವಕಾಶ ಕೇಳಿದರೆ, ಸಹಾನುಭೂತಿಯಿಂದ ಅದನ್ನು ಪರಿಶೀಲಿಸಿ; ಬೇಡಿಕೆಯು ನ್ಯಾಯಯುತ ಅಸಿದರೆ ಹೆಚ್ಚಿನ ಸಮಯಾವಕಾಶ ನೀಡುವುದನ್ನು ಶಾಲೆಗಳು ಪರಿಗಣಿಸಬಹುದು’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ. ಅದೇ ರೀತಿ, ಶುಲ್ಕ ಬಾಕಿ ಉಳಿಸಿಕೊಂಡಿರುವ ಪೋಷಕರಿಂದ ಶುಲ್ಕವನ್ನು ವಸೂಲಿ ಮಾಡಲು ಅಗತ್ಯ ಕ್ರಮವನ್ನೂ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ರಾಜಸ್ಥಾನದ ಪ್ರೋಗ್ರೆಸ್ಸಿವ್‌ ಸ್ಕೂಲ್ ಅಸೋಸಿಯೇಷನ್ ಮತ್ತು ರಾಜಸ್ಥಾನ ಸರ್ಕಾರದ ನಡುವಣ ಮೊಕದ್ದಮೆಗೆ ಸಂಬಂಧಿಸಿದಂತೆ ಮೇ 3ರಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು.

‘ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳನ್ನುಶಾಲೆಯಿಂದ ಕೈಬಿಡುವಂತಿಲ್ಲ. ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆ ಹಿಡಿಯುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಶುಲ್ಕ ವಸೂಲಿ ಮಾಡುವ ಉದ್ದೇಶದಿಂದ ಯಾವುದೇ ಕ್ರಮ ತೆಗೆದುಕೊಳ್ಳುವುದನ್ನು ಸುಪ್ರೀಂ ಕೋರ್ಟ್‌ ನಿರ್ಬಂಧಿಸಿರಲಿಲ್ಲ. ಈ ಬಗ್ಗೆ ಸ್ಪಷ್ಟನೆ ಕೇಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಎ.ಎಂ.ಖಾನ್‌ವಿಲ್ಕರ್ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ಪೀಠವು ಈ ಆದೇಶ ನೀಡಿದೆ.

ADVERTISEMENT

***

ಶಾಲೆಗಳು ಬೇಡಿಕೆ ಇಡುತ್ತಿರುವ ಮೊತ್ತವು, ಕಾನೂನಿನ ಅಡಿ ಸೂಚಿತ ಮೊತ್ತಕ್ಕಿಂತ ಹೆಚ್ಚಾಗಿದ್ದರೆ ವಿದ್ಯಾರ್ಥಿಗಳ ಪೋಷಕರು ಸಂಬಂಧಿತ ಪ್ರಾಧಿಕಾರಗಳಿಗೆ ದೂರು ನೀಡಬಹುದು

-ಸುಪ್ರೀಂ ಕೋರ್ಟ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.