ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಇಡೀ ದಿನ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಚೆನ್ನೈನಾದ್ಯಂತ ಶಾಲೆಗಳಿಗೆ ರಜೆ ನೀಡಲಾಗಿದೆ.
ಚೆನ್ನೈ, ತಿರುವಳ್ಳರ್, ಕಾಂಚೀಪುರಂ, ತಂಜಾವೂರು, ಪುದುಚೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 36 ಗಂಟೆಗಳಲ್ಲಿ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡಿನಲ್ಲಿ ಮಳೆ ಆರಂಭವಾಗಿದೆ. ಮುಂದಿನ ಎರಡು ದಿನಗಳಲ್ಲಿ ಚಂಡಮಾರುತ ಶ್ರೀಲಂಕಾದ ಕಡೆಗೆ ಚಲಿಸಲಿದೆ ಎಂದು ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.