ನವದೆಹಲಿ: ಅಯ್ಯಪ್ಪಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡಿದ್ದ ತೀರ್ಪಿಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆಗೆ ಒಂಬತ್ತು ಸದಸ್ಯರ ಪೀಠ ರಚಿಸಲು ‘ಸುಪ್ರೀಂ’ ಸೋಮವಾರ ನಿರ್ಧರಿಸಿದೆ.
ಇದೇ 13ರಿಂದ ಈ ಪೀಠ ವಿಚಾರಣೆ ಆರಂಭಿಸಲಿದೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಪಟ್ಟಿಯಲ್ಲಿ ಇದನ್ನು ದಾಖಲಿಸಲಾಗಿದೆ.ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ 2018ರಲ್ಲಿ ನೀಡಿದ್ದ ತೀರ್ಪು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
ಇವುಗಳನ್ನು ಏಳು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರುಳ್ಳ ಪೀಠ ಪರಿಶೀಲಿಸಬೇಕು ಎಂದು ಐವರು ಸದಸ್ಯರಿದ್ದ ಪೀಠ ಕಳೆದ ನ.14ರಂದು ಶಿಫಾರಸು ಮಾಡಿತ್ತು.
ಅರ್ಜಿಗಳ ವಿಚಾರಣೆ ಬಾಕಿ ಇರುವುದರಿಂದಾಗಿ, 2018ರ ತೀರ್ಪು ಅಂತಿಮವಲ್ಲ ಎಂದು ಸುಪ್ರೀಂ ಕೋರ್ಟ್ ಎರಡು ಬಾರಿ ಮೌಖಿಕವಾಗಿ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.