ತಿರುವನಂತಪುರ: ಸೆಬಿ ಅಧ್ಯಕ್ಷರಾದ ಮಾಧವಿ ಬುಚ್ ವಿರುದ್ಧ ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಜಂಟಿ ಸಂಸದೀಯ ಸಮಿತಿಯಿಂದ (ಜೆಪಿಸಿ) ತನಿಖೆ ನಡೆಸದಿದ್ದರೆ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.
‘ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿಗೆ ಬೆಂಬಲ ನೀಡಿದ್ದಾರೆ. ಪ್ರಧಾನಿಯ ಮೌನವು ವಿಶ್ವಾಸಾರ್ಹತೆಯ ನಾಶಕ್ಕೆ ಕಾರಣವಾಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ವಾಗ್ದಾಳಿ ನಡೆಸಿದ್ದಾರೆ.
‘ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವನ್ನು (ಇ.ಡಿ) ಬಳಸಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯಲಿಕ್ಕಾಗಿ ಕೇಂದ್ರ ಸರ್ಕಾರವು ಯತ್ನಿಸುತ್ತಿದೆ. ಇ.ಡಿ ನೋಟಿಸ್ ಮೂಲಕ ಬೆದರಿಕೆ ಹಾಕಲು ಪ್ರಯತ್ನಿಸಬೇಡಿ. ಇದನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಹಿಂಡೆನ್‌ಬರ್ಗ್ ಆರೋಪ ದೇಶದ ಅತ್ಯಂತ ಗಂಭೀರ ವಿಷಯ. ಈ ಕುರಿತಂತೆ ಜೆಪಿಸಿ ತನಿಖೆ ನಡೆಸಿ’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.