ನವದೆಹಲಿ: ಭಾರತ ರಾಷ್ಟ್ರ ಸಮಿತಿಯ (ಬಿಆರ್ಎಸ್) ಸಂಸದ ಬಿ.ಬಿ ಪಾಟೀಲ್ ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಿನ್ನೆ ಬಿಆರ್ಎಸ್ನ ಮತ್ತೊಬ್ಬ ಸಂಸದ ಪೋತುಂಗತಿ ರಾಮುಲು ಬಿಜೆಪಿ ಸೇರಿದ್ದರು. ಈ ಮೂಲಕ ಬಿಆರ್ಎಸ್ನ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರಿದ್ದಾರೆ.
ಲೋಕಸಭೆ ಚುನಾವಣೆಯ ಈ ಹೊಸ್ತಿಲಲ್ಲಿ ಬಿಆರ್ಎಸ್ ಪಕ್ಷಕ್ಕೆ ಹಿನ್ನಡೆಯಾದಂತಾಗಿದೆ.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಪಕ್ಷದ ತೆಲಂಗಾಣ ಉಸ್ತುವಾರಿ ತರುಣ್ ಚುಗ್ ಒಬಿಸಿ ಮೋರ್ಚಾ ಮುಖ್ಯಸ್ಥ ಲಕ್ಷ್ಮಣ್ ಅವರ ಸಮ್ಮುಖದಲ್ಲಿ ಬಿ.ಬಿ ಪಾಟೀಲ್ ಬಿಜೆಪಿ ಸೇರಿದರು.
ತೆಲಂಗಾಣದಲ್ಲಿ ಬಿಆರ್ಎಸ್ ಪಕ್ಷ ಅಧಿಕಾರ ಕಳೆದುಕೊಂಡ ಬಳಿಕ ಆ ಪಕ್ಷದ ಕೆಲ ನಾಯಕರು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಸೇರುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.