ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರೊಂದಿಗಿನ ಅಲ್ಪಾವಧಿಯ ಗುಂಡಿನ ಚಕಮಕಿಯ ನಂತರ ಭದ್ರತಾ ಪಡೆಗಳು ಭಾನುವಾರ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಸಂಗಮ್ ಪ್ರದೇಶದ ಅಂದಾನ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು ಮತ್ತು ಅಲ್ಪಾವಧಿಯ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ನಂತರದ ಹುಡುಕಾಟದಲ್ಲಿ ಕಂಬಳಿಗಳು ಮತ್ತು ಇತರ ವಸ್ತುಗಳು ‘ಗುಹೆಯಂತಹ’ ಅಡಗುತಾಣದಲ್ಲಿ ಕಂಡುಬಂದಿವೆ ಎಂದು ಅಧಿಕಾರಿ ಹೇಳಿದ್ದಾರೆ.
ಎರಡೂ ಕಡೆಗಳಲ್ಲೂ ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.