ಜಮ್ಮು: ಜಮ್ಮು–ಕಾಶ್ಮೀರದ ಕಿಸ್ತವಾರ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಚಾತ್ರೂ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿ ಮೇರೆಗೆ ಜಂಟಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಹಲವು ಸುತ್ತಿನ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದರು.
ಕಳೆದ ಎರಡು ತಿಂಗಳಿನಿಂದ ಕಿಸ್ತವಾರ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.
ಚಾತ್ರೂ ಪ್ರದೇಶದ ನೈಡ್ಘಮ್‌ನಲ್ಲಿ ಕಳೆದ ಸೆ.13ರಂದು ನಡೆದ ಗುಂಡಿನ ಚಕಮಕಿಯಲ್ಲಿ ಕಿರಿಯ ಅಧಿಕಾರಿ ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.