ನವದೆಹಲಿ: ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಅಶೋಕ್ ಗೆಹಲೋತ್ ಅವರನ್ನು ಹೊರಗಿಡಲಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ತಿಳಿಸಿವೆ. ಹೀಗಾಗಿ ಸೆಲ್ಜಾ ಕುಮಾರಿ ಅಥವಾ ರಾಹುಲ್ ಗಾಂಧಿ ಅವರ ಆಪ್ತರೆನಿಸಿಕೊಂಡಿರುವ ಕೆ.ಸಿ. ವೇಣುಗೋಪಾಲ್ ಅವರನ್ನು ಸ್ಪರ್ಧೆಗೆ ನಿಯೋಜಿಸುವ ಸಾಧ್ಯತೆಗಳಿವೆ.
ಆದರೆ, ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.
ಸೋಮವಾರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರು ಪಕ್ಷದ ಅಧ್ಯಕ್ಷರಾಗಲು ಬಯಸುವುದಿಲ್ಲ ಎಂದು ತಿಳಿಸಿದ್ದರು. ಮಧ್ಯಪ್ರದೇಶದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಬಯಸಿರುವುದಾಗಿಯೂ ಹೇಳಿದ್ದರು.
ರಾಜಸ್ಥಾನದಲ್ಲಿ ರಾಜಕೀಯ ಪರಿಸ್ಥಿತಿ ಉಲ್ಬಣಿಸಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವಿಚಾರದಲ್ಲಿ ಹೈಕಮಾಂಡ್ ‘ಪ್ಲಾನ್ ಬಿ’ ಬಗ್ಗೆ ಯೋಚನೆ ಮಾಡುವಂತೆ ಆಗಿದೆ.
‘ಪ್ಲಾನ್ ಬಿ’ನಂತೆ ಸಂಭಾವ್ಯರಲ್ಲಿ ಕಮಲನಾಥ್ ಅವರು ಸ್ಪರ್ಧೆಗೆ ನಿರಾಕರಿಸಿದ್ದಾರೆ. ಹೀಗಾಗಿ ಸದ್ಯ ಕಾಂಗ್ರೆಸ್ ಹೈಕಮಾಂಡ್ ಬೇರೆ ನಾಯಕರತ್ತ ನೋಡುವಂತೆ ಆಗಿದೆ.
ಇದನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.