ನವದೆಹಲಿ: ‘ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಪರಿಸರದಲ್ಲಿ ಪ್ರತಿಭಟನೆ ನಡೆದಾಗ ಮುನಿರ್ಕಾ ವಿಹಾರ್ ಪ್ರದೇಶದಲ್ಲಿ ವಾಸಿಸುವ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ’ ಎಂದು ಹಿರಿಯ ನಾಗರಿಕರ ವೇದಿಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.
ಈ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಅಪರಿಚಿತ ವ್ಯಕ್ತಿಗಳು ತಮ್ಮ ಮನೆಯ ಬಾಗಿಲು ಬಡಿದು ಶೌಚಾಲಯ ಬಳಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಕೋರುತ್ತಾರೆ. ಆದ್ದರಿಂದ ಈ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು ಮತ್ತು ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಸ್ಥಾಪಿಸಬೇಕು ಎಂದೂ ಬೇಡಿಕೆ ಮುಂದಿಟ್ಟಿದ್ದಾರೆ.
ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಪ್ರತಿಭಟನಾ ಸ್ಥಳಕ್ಕೆ ಬರುವ ಮಹಿಳಾ ಪತ್ರಕರ್ತೆಯರು, ಪೊಲೀಸರಿಗೂ ತೊಂದರೆಯಾಗುತ್ತದೆ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.