ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ನಳಿನ್ ಪ್ರಭಾತ್ ಅವರನ್ನು ದೇಶದ ಭದ್ರತಾ ನಿಗ್ರಹ ಸಂಸ್ಥೆ ರಾಷ್ಟ್ರೀಯ ಭದ್ರತಾ ಪಡೆಯ(ಎನ್ಎಸ್‌ಜಿ) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಇಲಾಖೆ ತಿಳಿಸಿದೆ.
ಎನ್ಎಸ್‌ಜಿಯ ಪ್ರಧಾನ ನಿರ್ದೇಶಕರಾಗಿ ಅವರ ನೇಮಕವನ್ನು ಸಂಪುಟದ ನೇಮಕಾತಿ ಸಮಿತಿಯು (ಎಸಿಸಿ) ಅನುಮೋದನೆಗೊಳಿಸಿದೆ. ಅವರು 2028ರ ಆಗಸ್ಟ್ 31ರವರೆಗೆ ಈ ಹುದ್ದೆಯಲ್ಲಿ ಇರಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
1992ರ ಐಪಿಎಸ್ ಬ್ಯಾಚ್‌ನ ಆಂಧ್ರಪ್ರದೇಶ ಕೇಡರ್ ಅಧಿಕಾರಿಯಾಗಿರುವ ಪ್ರಭಾತ್ ಅವರು, ಕೇಂದ್ರೀಯ ಮೀಸಲು ಪಡೆಯ (ಸಿಆರ್‌ಪಿಎಫ್) ಹೆಚ್ಚುವರಿ ಪ್ರಧಾನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಪ್ನ ತಿವಾರಿಗೆ ಬಡ್ತಿ: ಗುಪ್ತಚರ ದಳದ ವಿಶೇಷ ನಿರ್ದೇಶಕಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಸಪ್ನ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಅವರು 1992ರ ಐಪಿಎಸ್ ಬ್ಯಾಚ್‌ನ ಒಡಿಶಾ ಕೇಡರ್ ಅಧಿಕಾರಿಯಾಗಿದ್ದು, ಪ್ರಸ್ತುತ ಗುಪ್ತಚರ ದಳದ ಹೆಚ್ಚುವರಿ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.