ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ (82) ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿಸೋಮವಾರ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಅ. 2ರಂದುಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ:ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವದ ಸೇನಾನಿಯಾಗಿದ್ದ ಮುಲಾಯಂ: ಪಿಎಂ ಮೋದಿ
'ನನ್ನ ಗೌರವಾನ್ವಿತ ತಂದೆಯವರು ಹಾಗೂ ಎಲ್ಲರ ನಾಯಕ ಇನ್ನಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿಳಿಸಿರುವುದಾಗಿ ಸಮಾಜವಾದಿ ಪಕ್ಷದ ಟ್ವಿಟರ್ ಪುಟದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.