ನವದೆಹಲಿ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ 7 ಮಂದಿ ಶಂಕಿತ ಶೂಟರ್‌ಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಅಕ್ಟೋಬರ್ 12ರಂದು ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರನ್ನು ಹತ್ಯೆ ಮಾಡಲಾಗಿತ್ತು. ಸಿದ್ದೀಕಿ ಹತ್ಯೆಯ ಹೊಣೆ ಹೊತ್ತು, ಬಿಷ್ಣೋಯಿ ಗ್ಯಾಂಗ್‌ನ ಸದಸ್ಯ ಎನ್ನಲಾದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ. ಘಟನೆ ನಡೆದು ಹಲವು ದಿನಗಳ ಬಳಿಕ ಈ ಮಹತ್ತರ ಬೆಳವಣಿಗೆ ನಡೆದಿದೆ.
ಪಂಜಾಬ್ ಹಾಗೂ ಇತರ ರಾಜ್ಯಗಳಿಂದ 7 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಸಿದ್ದೀಕಿ ಹತ್ಯೆಗೂ ಇವರಿಗೂ ನಂಟಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.