ADVERTISEMENT

ಬಿಹಾರ | ಸ್ಫೋಟ: ಏಳು ಮಕ್ಕಳಿಗೆ ಗಂಭೀರ ಗಾಯ, ತನಿಖೆಗೆ ಎಸ್‌ಐಟಿ ರಚನೆ

ಪಿಟಿಐ
Published 1 ಅಕ್ಟೋಬರ್ 2024, 11:14 IST
Last Updated 1 ಅಕ್ಟೋಬರ್ 2024, 11:14 IST
<div class="paragraphs"><p>ಸ್ಫೋಟ </p></div>

ಸ್ಫೋಟ

   

ಭಾಗಲ್ಪುರ: ಬಿಹಾರದ ಭಾಗಲ್ಪುರ ಜಿಲ್ಲೆಯ ಕಸದ ರಾಶಿಯೊಂದರ ಬಳಿ ಸ್ಫೋಟ ಸಂಭವಿಸಿದ್ದು, ಏಳು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಖಿಲಾಫತ್ ನಗರ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ಮಕ್ಕಳು ಕಸದ ರಾಶಿಯ ಬಳಿ ಆಟ ಆಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಏಳು ಮಕ್ಕಳಲ್ಲಿ ಮೂವರ ಸ್ಥಿತಿ ಚಿಂತಾ ಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಶ್ವಾನ ದಳ ಹಾಗೂ ವಿಧಿವಿಜ್ಞಾನ ತಜ್ಞರು ಧಾವಿಸಿದ್ದು, ಸ್ಫೋಟದ ವಸ್ತುಗಳನ್ನು ನಿಷ್ಕ್ರಿಯಗೊಳಿಸಲು ಹಾಗೂ ಸ್ಫೋಟದ ವಸ್ತು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.