ಠಾಣೆ: ಮೊಬೈಲ್ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರನ್ನು ಥಳಿಸಿ ಕೊಲೆ ಮಾಡಲಾಗಿದ್ದು, ಘಟನೆ ಸಂಬಂಧ ಏಳು ಆರೋಪಿಗಳನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ರಹ್ಮತ್ ಸಹಾ ಆಲಂ ಅವರನ್ನು ಕಳ್ಳ ಎಂದು ಆರೋಪಿಸಿ ಭಿವಂಡಿಯಲ್ಲಿ ಗುಂಪೊಂದು ಥಳಿಸಿ ಹತ್ಯೆ ಮಾಡಿದ ಘಟನೆ ಬುಧವಾರ ನಡೆದಿದೆ. 7 ಆರೋಪಿಗಳನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಉಳಿದವರಿಗಾಗಿ ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ಪೊಲೀಸರ ತಂಡಗಳು ಶೋಧ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಹಮ್ಮದ್ 6 ತಿಂಗಳ ಹಿಂದೆ ಭಿವಂಡಿಗೆ ಬಂದು ನೆಲೆಸಿದ್ದರು ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.