ಖಗಾರಿಯಾ: ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 7 ಜನರು ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮದುವೆ ಸಮಾರಂಭ ಮುಗಿಸಿ ಜೀಪ್ನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಜೀಪಿನಲ್ಲಿದ್ದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಖಗಾರಿಯಾ ಪೊಲೀಸ್ ಅಧೀಕ್ಷಕ ಚಂದನ್ ಕುಶ್ವಾಹ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.