ADVERTISEMENT

ಮೂರು ಪ್ರತ್ಯೇಕ ಅಪಘಾತ: 15 ಮಂದಿ ಸಾವು, 36 ಜನರಿಗೆ ಗಾಯ

ಪಿಟಿಐ
Published 14 ಜೂನ್ 2024, 4:55 IST
Last Updated 14 ಜೂನ್ 2024, 4:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಆಂಧ್ರ, ಜಾರ್ಖಂಡ್‌ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಸಂಭವಿಸಿದ ಮೂರು ಅಪಘಾತ ಘಟನೆಗಳಲ್ಲಿ 15 ಜನರು ಮೃತಪಟ್ಟಿದ್ದು 36 ಜನರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ...

ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದೇವಾಲಯಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಬೆಳಗ್ಗೆ 4.30ರ ಸುಮಾರಿಗೆ ದತಿಯಾ ಜಿಲ್ಲೆಯ ಮೈಥನಾ ಪಾಲಿ ಬಳಿ ಅಪಘಾತ ಸಂಭವಿಸಿದೆ. ಇವರು ರತನ್‌ಗಢದ ಮಾತಾ ದೇವಾಲಯಕ್ಕೆ ತೆರಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಆಂಧ್ರಪ್ರದೇಶ...

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಸೀತಾನಪಲ್ಲಿ ಸಮೀಪ ಟ್ರಕ್‌ ಮತ್ತು ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. 

ಎರಡೂ ವಾಹನಗಳ ಇಬ್ಬರು ಚಾಲಕರು ಮತ್ತು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾರ್ಖಂಡ್‌...

ಗರ್ವಾ ಜಿಲ್ಲೆಯಲ್ಲಿ ಆಟೋ ರಿಕ್ಷಾ ಹಾಗೂ ಟ್ರಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ 6 ಜನರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.