ADVERTISEMENT

ಹತ್ರಾಸ್ ಕಾಲ್ತುಳಿತದಲ್ಲಿ 100 ಸಾವು: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂತಾಪ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 13:54 IST
Last Updated 2 ಜುಲೈ 2024, 13:54 IST
<div class="paragraphs"><p> ಪ್ರಧಾನಿ&nbsp; ಮೋದಿ,&nbsp;ರಾಷ್ಟ್ರಪತಿ ಮುರ್ಮು, </p></div>

ಪ್ರಧಾನಿ  ಮೋದಿ, ರಾಷ್ಟ್ರಪತಿ ಮುರ್ಮು,

   

ಹತ್ರಾಸ್ (ಉತ್ತರಪ್ರದೇಶ): ಇಲ್ಲಿನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 100 ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿ ಪೋಸ್ಟ್‌ ಪ್ರಕಟಿಸಿದ್ದಾರೆ. ಈ ಘಟನೆ ಹೃದಯ ವಿದ್ರಾವಕವಾಗಿದ್ದು ಮೃತರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಪ್ರಾರ್ಥಿಸಿದ್ದಾರೆ. 

ADVERTISEMENT

ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ, ಮೃತಕುಟುಂಬದವರಿಗೆ ತಲಾ ₹ 2 ಲಕ್ಷ, ಗಾಯಾಳುಗಳಿಗೆ ತಲಾ ₹ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ. 

ಹತ್ರಾಸ್‌ನಲ್ಲಿ ನಡೆದ ಘಟನೆ ನನಗೆ ಅತೀವ ನೋವು ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಕೂಡಲೇ ಸರ್ಕಾರ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಘಟನೆ ಸ್ಥಳದಲ್ಲಿ ಕಾರ್ಯಕರ್ತರು ಸಹಾಯ ನೀಡಬೇಕು ಎಂದು ಅವರು ಹೇಳಿದ್ದಾರೆ.

ಹತ್ರಾಸ್ ಜಿಲ್ಲೆಯ ಮೋಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಬಾಬಾ ಅವರ ಧಾರ್ಮಿಕ ಕಾರ್ಯಕ್ರಮದಲ್ಲಿ ಘಟನೆ ನಡೆದಿದ್ದು 100 ಜನರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರಲ್ಲಿ ಬಹುತೇಕರು ಮಹಿಳೆಯರೇ ಆಗಿದ್ದಾರೆ. ಮೂವರು ಮಕ್ಕಳು ಹಾಗೂ ಪುರುಷ ಮೃತಪಟ್ಟಿದ್ದಾರೆ ಎಂದು ಹತ್ರಾಸ್ ಎಎಸ್‌ಪಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.