ರಾಯಪುರ: ಛತ್ತೀಸಗಢದ ಬಸ್ತರ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ನಕ್ಸಲರು ಹತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.
ಗಡಿ ಭದ್ರತಾ ಪಡೆ, ಜಿಲ್ಲಾ ಮೀಸಲು ಪಡೆ ಹಾಗೂ ವಿಶೇಷ ಕಾರ್ಯಪಡೆಗಳು, ನಾರಾಯಣಪುರ ಮತ್ತು ಕಾಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಶನಿವಾರ ಮುಂಜಾನೆ 8 ಗಂಟೆಗೆ ಜಂಟಿ ಕಾರ್ಯಾಚರಣೆ ನಡೆಸಿದವು.
ಈ ವೇಳೆ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ರಾಯಪುರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಲ್ಲಿದ್ದ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದರು.
ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತರ್ ಪ್ರದೇಶದಲ್ಲಿ ಈ ವರ್ಷದಲ್ಲಿ ಇದುವರೆಗೆ 197 ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.