ಇಂಫಾಲ: ಇಬ್ಬರು ವಿದ್ಯಾರ್ಥಿಗಳ ಮೃತದೇಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಮಣಿಪುರದ ಇಂಫಾಲ ಮೂಲದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಈ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳ ಸಚಿವಾಲಯದತ್ತ ಸಾಗುವುದನ್ನು ಭದ್ರತಾ ಸಿಬ್ಬಂದಿ ತಡೆದಿದ್ದು, ವಿದ್ಯಾರ್ಥಿಗಳು- ಪೊಲೀಸರ ನಡುವೆ ಗಲಾಟೆ ಉಂಟಾಗಿದೆ.
ಇದನ್ನೂ ಓದಿ: ನಾಪತ್ತೆಯಾದ ವಿದ್ಯಾರ್ಥಿಗಳ ಮೃತದೇಹದ ಫೋಟೊ ಹರಿದಾಟ: ಮಣಿಪುರದಲ್ಲಿ ಅಲರ್ಟ್
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ಮಾಡಿದ್ದು, 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಹೆಚ್ಚಿನವರು ವಿದ್ಯಾರ್ಥಿನಿಯರು ಎಂದು ಹೇಳಲಾಗಿದೆ.
ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ(ಸೆ.25)ರಂದು ಫಿಜಾಮ್ ಹೇಮ್ಜಿತ್ (2) ಹಾಗೂ ಹಿಜಾಮ್ ಲಿಂಥೋಯಿಂಗಂಬಿ (17) ಹೆಸರಿನ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಮಣಿಪುರ ಸರ್ಕಾರ ಪ್ರಕರಣವನ್ನು ತನಿಖೆ ನಡೆಸುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.