ADVERTISEMENT

ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ ಶ್ಲಾಘಿಸಿದ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 15:49 IST
Last Updated 14 ಜುಲೈ 2024, 15:49 IST
<div class="paragraphs"><p>ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾನುವಾರ ಪ್ರಧಾನಮಂತ್ರಿ ಕಾಲೇಜ್‌ ಆಫ್‌ ಎಕ್ಸ್‌ಲೆನ್ಸ್‌ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾಲೇಜಿನ ಭಾರತೀಯ ಜ್ಞಾನ ಸಂಪ್ರದಾಯ ಘಟಕದಲ್ಲಿ ಪುಸ್ತಕದ ಮೇಲೆ ಹಸ್ತಾಕ್ಷರ ಹಾಕಿದರು. ಮುಖ್ಯಮಂತ್ರಿ ಮೋಹನ್‌ ಯಾದವ್‌ ಕೂಡ ಜೊತೆಗಿದ್ದರು</p></div>

ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾನುವಾರ ಪ್ರಧಾನಮಂತ್ರಿ ಕಾಲೇಜ್‌ ಆಫ್‌ ಎಕ್ಸ್‌ಲೆನ್ಸ್‌ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾಲೇಜಿನ ಭಾರತೀಯ ಜ್ಞಾನ ಸಂಪ್ರದಾಯ ಘಟಕದಲ್ಲಿ ಪುಸ್ತಕದ ಮೇಲೆ ಹಸ್ತಾಕ್ಷರ ಹಾಕಿದರು. ಮುಖ್ಯಮಂತ್ರಿ ಮೋಹನ್‌ ಯಾದವ್‌ ಕೂಡ ಜೊತೆಗಿದ್ದರು

   

–ಪಿಟಿಐ ಚಿತ್ರ

ಇಂದೋರ್‌: ‘ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತಂದಿದ್ದು, ಇದರಿಂದ 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ದೇಶವಾಗಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯಪಟ್ಟರು.

ADVERTISEMENT

ಇಂದೋರ್‌ನ ಅಟಲ್‌ ಬಿಹಾರಿ ವಾಜ‍ಪೇಯಿ ಸರ್ಕಾರಿ ಕಾಲೇಜಿನಲ್ಲಿ ಭಾನುವಾರ ನಡೆದ ಮಧ್ಯಪ್ರದೇಶದ 55 ಜಿಲ್ಲೆಗಳಲ್ಲಿ ಆರಂಭಗೊಂಡ ‘ಪ್ರಧಾನಮಂತ್ರಿ ಕಾಲೇಜ್‌ ಆಫ್‌ ಎಕ್ಸಲೆನ್ಸ್‌’ಗೆ ಚಾಲನೆ ನೀಡಿ ಮಾತನಾಡಿದರು. 

‘ಮಧ್ಯಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಎನ್‌ಇಪಿ ಜಾರಿಗೊಳಿಸಿದ್ದನ್ನು ಶ್ಲಾಘಿಸಿದ ಶಾ, 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ದೇಶವಾಗಿರಬೇಕು ಎಂದು ಪ್ರಧಾನಿ ಮೋದಿ ಗುರಿ ನಿಗದಿಪಡಿಸಿದ್ದಾರೆ. ಇದು ಸಾಧ್ಯವಾಗಲು ಎನ್‌ಇಪಿಯು ಪ್ರಮುಖ ಪಾತ್ರ ವಹಿಸುತ್ತದೆ. ದೇಶ ಅಭಿವೃದ್ಧಿಯಾಗಬೇಕಾದರೆ, ಶಿಕ್ಷಣವೇ ಮುಖ್ಯ ಅಡಿಪಾಯ. ಮುಂದಿನ 25 ವರ್ಷದ ದೂರದೃಷ್ಟಿ ಇಟ್ಟುಕೊಂಡು ಎನ್‌ಇಪಿ ಜಾರಿಗೆ ತರಲಾಗಿದೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.