ADVERTISEMENT

ತೆಲಂಗಾಣ ಬಿಜೆಪಿ ನಾಯಕರ ಜೊತೆ ಶಾ, ನಡ್ಡಾ ಸಭೆ

ಪಿಟಿಐ
Published 28 ಫೆಬ್ರುವರಿ 2023, 11:24 IST
Last Updated 28 ಫೆಬ್ರುವರಿ 2023, 11:24 IST
ಅಮಿತ್‌ ಶಾ
ಅಮಿತ್‌ ಶಾ   

ನವದೆಹಲಿ: ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡುವ ನಿಟ್ಟಿನಲ್ಲಿ ಬಿಜೆಪಿ ಹಿರಿಯ ನಾಯಕರಾದ ಕೇಂದ್ರ ಸಚಿವ ಅಮಿತ್‌ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತೆಲಂಗಾಣ ಬಿಜೆಪಿ ನಾಯಕರ ಜೊತೆ ಮಂಗಳವಾರ ಸಭೆ ನಡೆಸಿದರು.

ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಅವರು ಸಭೆಯಲ್ಲಿ ಹಾಜರಿದ್ದರು. ಅವರ ಜೊತೆ ಪಕ್ಷದ ರಾಜ್ಯ ಮತ್ತು ಕೇಂದ್ರದ ಹಲವು ನಾಯಕರು ಉಪಸ್ಥಿತರಿದ್ದರು.

ಈ ಸಭೆ ಕುರಿತು ಅಧಿಕೃತ ಹೇಳಿಕೆ ನೀಡಲಾಗಿಲ್ಲ. ಆದರೆ, ಈ ಸಭೆಯು ಚುನಾವಣೆಗೆ ಸಂಬಂಧಿಸಿದೆ. ಕಾಂಗ್ರೆಸ್‌ ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷಗಳು ಪ್ರಚಾರ ಕಾರ್ಯವನ್ನು ತೀವ್ರಗೊಳಿಸಿರುವ ಬೆನ್ನಲ್ಲಿ ಈ ಸಭೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ದೆಹಲಿ ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಬಿಆರ್‌ಎಸ್‌ ಸಂಸದೆ ಕೆ. ಕವಿತಾ ಕೂಡ ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ಸಭೆ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.