ADVERTISEMENT

ಎನ್‌ಸಿಪಿ ಮಾನ್ಯತೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶರದ್ ಪವಾರ್

ಪಿಟಿಐ
Published 13 ಫೆಬ್ರುವರಿ 2024, 14:21 IST
Last Updated 13 ಫೆಬ್ರುವರಿ 2024, 14:21 IST
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್    

ನವದೆಹಲಿ : ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವೇ ನಿಜವಾದ ಎನ್‌ಸಿಪಿ ಎಂದು ಚುನಾವಣಾ ಆಯೋಗ ಮಾನ್ಯತೆ ನೀಡಿರುವುದನ್ನು ಪ್ರಶ್ನಿಸಿ ಶರದ್ ಪವಾರ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

ಶರದ್ ಪವಾರ್ ಅವರು ಅರ್ಜಿ ಸಲ್ಲಿಸಿದಲ್ಲಿ ತನ್ನ ವಾದ ಆಲಿಸದೆ ಯಾವುದೇ ಆದೇಶ ನೀಡಬಾರದು ಎಂಬ ಕೋರಿಕೆಯೊಂದಿಗೆ ಅಜಿತ್ ಪವಾರ್ ಬಣವು ಸುಪ್ರೀಂ ಕೋರ್ಟ್‌ಗೆ ಕೇವಿಯಟ್‌ ಒಂದನ್ನು ಈಗಾಗಲೇ ಸಲ್ಲಿಸಿದೆ.

ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದು ಚುನಾವಣಾ ಆಯೋಗವು ಫೆಬ್ರುವರಿ 6ರಂದು ಆದೇಶ ನೀಡಿದೆ. ಇದು ಎನ್‌ಸಿಪಿ ಸಂಸ್ಥಾಪಕರೂ ಆಗಿರುವ ಶರದ್ ಪವಾರ್ ಅವರಿಗೆ ಎದುರಾದ ದೊಡ್ಡ ಹಿನ್ನಡೆ ಎಂದು ವಿಶ್ಲೇಷಿಸಲಾಗಿದೆ. ಎನ್‌ಸಿಪಿಯ ‘ಗಡಿಯಾರ’ ಚಿಹ್ನೆಯನ್ನು ಚುನಾವಣಾ ಆಯೋಗವು ಅಜಿತ್ ಪವಾರ್ ಬಣಕ್ಕೆ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.