ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಶಶಿ ತರೂರ್ ಅವರ ಸ್ಪರ್ಧೆಗೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಹಸಿರು ನಿಶಾನೆ ತೋರಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಸಹ ಆಕಾಂಕ್ಷಿಯಾಗಿದ್ದು, ಚುನಾವಣಾ ಕಣ ರಂಗೇರುವ ನಿರೀಕ್ಷೆ ಇದೆ.
ರಾಹುಲ್ ಗಾಂಧಿ ಅವರನ್ನೇ ಮತ್ತೊಮ್ಮೆ ಅಧ್ಯಕ್ಷರನ್ನಾಗಿ ಆಯ್ಕೆಮಾಡ
ಬೇಕೆಂದು ಪಕ್ಷದ ಕೆಲವು ಪ್ರಮುಖ ನಾಯಕರು ಒತ್ತಡ ಹೇರಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ.
ಶಶಿ ತರೂರ್ ಸೋಮವಾರ ಸೋನಿಯಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿಗ, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅನುಮತಿ ನೀಡಿದರು. ಗಾಂಧಿ ಕುಟುಂಬದ ಬೆಂಬಲಿತ ಅಭ್ಯರ್ಥಿ ತಮ್ಮ ಎದುರು ಕಣಕ್ಕಿಳಿದರೂ ತರೂರ್ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಮೂಲಗಳು ಖಚಿತಪಡಿಸಿವೆ. ‘ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರೆ ಸ್ಪರ್ಧೆಯಿಂದ ಹಿಂದೆ ಸರಿಯುವೆ’ ಎಂದು ತರೂರ್ ಹೇಳಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.