ADVERTISEMENT

ಬಿಜೆಪಿ ಒನ್ ಮ್ಯಾನ್ ಆರ್ಮಿ, ಕಾಂಗ್ರೆಸ್ ಸೇರಿದ ಶತ್ರುಘ್ನ ಸಿನ್ಹಾ

​ಪ್ರಜಾವಾಣಿ ವಾರ್ತೆ
Published 11 ಮೇ 2019, 10:24 IST
Last Updated 11 ಮೇ 2019, 10:24 IST
   

ನವದೆಹಲಿ: ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ನೇತಾರರಾದ ಕೆ.ಸಿ. ವೇಣುಗೋಪಾಲ್ ಮತ್ತುವಕ್ತಾರ ರಣ್‍ದೀಪ್ ಸುರ್ಜೇವಾಲ ಅವರ ಉಪಸ್ಥಿತಿಯಲ್ಲಿ ಸಿನ್ಹಾ ಕಾಂಗ್ರೆಸ್‍ಗೆ ಸೇರ್ಪಡೆಯಾದರು.

ಕಾಂಗ್ರೆಸ್‍ಗೆ ಸೇರ್ಪಡೆ ಆದ ಕೂಡಲೇ ಆಡಳಿತಾರೂಢ ಬಿಜೆಪಿ ವಿರುದ್ದ ಸಿನ್ಹಾ ಕಿಡಿಕಾರಿದ್ದಾರೆ. ಬಿಜೆಪಿಯಲ್ಲಿ ಪ್ರಜಾಪ್ರಭುತ್ವವು ಸರ್ವಾಧಿಕಾರಿ ಧೋರಣೆಯಾಗಿ ಬದಲಾಗುವುದನ್ನು ನಾನು ನೋಡಿದ್ದೇನೆ. ಅದು ಒನ್ ಮ್ಯಾನ್ ಪಾರ್ಟಿ ಮತ್ತು ಟು ಮ್ಯಾನ್ ಶೋ.

ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ. ವಸಾಹತುಶಾಹಿ ಆಡಳಿತದಿಂದ ಭಾರತವನ್ನು ಮುಕ್ತಗೊಳಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್ ಮಾತ್ರ ಎಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿನ್ಹಾ ಹೇಳಿದ್ದಾರೆ.

ADVERTISEMENT

ಮಾರ್ಚ್ 29ಕ್ಕೆ ನವದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದ ಸಿನ್ಹಾ, ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದರು.

ಕಾಂಗ್ರೆಸ್ ನೇತಾರನನ್ನು ಬಿಜೆಪಿ ನೇತಾರ ಎಂದ ಶತ್ರುಘ್ನ ಸಿನ್ಹಾ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿನ್ಹಾ, ಶಕ್ತಿ ಸಿಂಗ್ ಗೊಹಿಲ್ (ಬಿಹಾರದ ಕಾಂಗ್ರೆಸ್ ಉಸ್ತುವಾರಿ) ಅವರು ಬಿಹಾರ ಮತ್ತು ಗುಜರಾತಿನಲ್ಲಿ ಬಿಜೆಪಿಯ ಬೆನ್ನೆಲುಬಾಗಿದ್ದಾರೆ ಎಂದು ಹೇಳಿದರು.ತಕ್ಷಣವೇ ಅಲ್ಲಿದ್ದವರು ಬಿಜೆಪಿ ಅಲ್ಲ ಕಾಂಗ್ರೆಸ್ ಅಂದರು. ತಪ್ಪು ತಿದ್ದಿಕೊಂಡ ಸಿನ್ಹಾ, ಈಗ ನಾನು ಹೊಸದಾಗಿ ಕಾಂಗ್ರೆಸ್‍ಗೆ ಸೇರಿರುವುದಿಂದ ಬಾಯ್ತಪ್ಪಿ ಈ ರೀತಿ ಹೇಳಿದೆ.ಇಂದು ಬಿಜೆಪಿ ಸಂಸ್ಥಾಪನಾ ದಿನವೂ ಅಲ್ಲವೇ.ಇಲ್ಲಿ ನೆರದಿರುವವರೆಲ್ಲರೂ ಪ್ರಬುದ್ಧರು, ನಾನು ಉದ್ದೇಶಪೂರ್ವಕವಾಗಿ ಈ ರೀತಿ ಹೇಳಿಲ್ಲ ಎಂಬುದು ನಿಮಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.